logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ ಪಡುಗೋಪಾಡಿಯ ಪೈಂಟರ್ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
22 Jul 2022
post image

ಕುಂದಾಪುರ: ಪೇಟೆಗೆ ಹೋದ ಯುವಕನೋರ್ವ ಮರಳಿ‌ ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿರುವ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮದ ಪಡುಗೋಪಾಡಿ ಎಂಬಲ್ಲಿ ನಡೆದಿದೆ. ಪಡುಗೋಪಾಡಿ ನಿವಾಸಿ ಸಂಜೀವ ಮೊಗವೀರ ಅವರ ಮಗ 27ವರ್ಷದ ಯೋಗೀಶ್ ನಾಪತ್ತೆಯಾದ ಯುವಕ.‌ ಈತ ಪೈಂಟಿಂಗ್‌ ಕೆಲಸ ಮಾಡುತ್ತಿದ್ದು, ಜುಲೈ 19ರಂದು ಎಂದಿನಂತೆ ಕೆಲಸ ಮುಗಿಸಿ ಮನೆಗೆ ಬಂದಿದ್ದನು. ಬಳಿಕ ಸಂಜೆ 5ಗಂಟೆಗೆ ಮನೆಯಿಂದ ಹೋದವನು, ಬಳಿಕ ವಾಪಾಸು ಬಾರದೆ ನಾಪತ್ತೆಯಾಗಿದ್ದಾನೆ‌. ಸಂಬಂಧಿಕರ ಮನೆ, ಸ್ನೇಹಿತರ ಮನೆ ಸೇರಿದಂತೆ ಎಲ್ಲ ಕಡೆ ಹುಡುಕಾಡಿದರೂ ಈವರೆಗೂ ಯೋಗೀಶ್ ಪತ್ತೆಯಾಗಿಲ್ಲ. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.