logo
WhatsApp Image 2026-04-02 at 14.46.04.jpeg
hindalco everlast.jpeg

ಪಾಕಿಸ್ತಾನ: ಹಿಂದೂ ದೇವಾಲಯದ ಮೇಲೆ ರಾಕೆಟ್ ದಾಳಿ

ಟ್ರೆಂಡಿಂಗ್
share whatsappshare facebookshare telegram
17 Jul 2023
post image

ಪಾಕಿಸ್ತಾನ: ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳು ರಾಕೆಟ್ ಲಾಂಚರ್ಗಳಿಂದ ದಾಳಿ ನಡೆಸಿರುವ ಘಟನೆ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

ಕಾಶ್ಮೋರ್ನಲ್ಲಿರುವ ದೇವಾಲಯವೊಂದರ ಮೇಲೆ ಭಾನುವಾರ ಮುಂಜಾನೆ ರಾಕೆಟ್ ಲಾಂಚರ್ಗಳ ಮೂಲಕ ದಾಳಿ ಮಾಡಿ ಹಾನಿ ಮಾಡಲಾಗಿದೆ. ಸ್ಥಳಕ್ಕೆ ಕಾಶ್ಮೋರ್- ಕಂಧಕೋಟ್ ಪೊಲೀಸರು ಮತ್ತು ಎಸ್ಎಸ್ಪಿ ಇರ್ಫಾನ್ ಸಮ್ಮೋ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ, “ದಾಳಿ ಸಂದರ್ಭ ದೇವಸ್ಥಾನವನ್ನು ಮುಚ್ಚಲಾಗಿತ್ತು. ಬಾಗ್ರಿ ಸಮುದಾಯದವರು ವಾರ್ಷಿಕ ಪೂಜೆಯ ಸಂದರ್ಭದಲ್ಲಿ ದೇವಾಲಯವನ್ನು ತೆರೆಯುತ್ತಾರೆ. ಸ್ಥಳಕ್ಕೆ ಧಾವಿಸಿದ ನಮ್ಮ ಪೊಲೀಸರ ಮೇಲೂ ಗುಂಡು ಹಾರಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಸಲಾಗುತ್ತಿದೆ. ಸುಮಾರು 8 ರಿಂದ 9 ಮಂದಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಬಗ್ಗೆ ಪ್ರತಿಕ್ರಿಯಿಸಿದ ಬಾಗ್ರಿ ಸಮುದಾಯದ ಮುಖಂಡ ಡಾ. ಸುರೇಶ್, ಇಲ್ಲಿನ ಜನರು ತುಂಬಾ ಭಯಭೀತರಾಗಿದ್ದಾರೆ. ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಎಸ್ಎಸ್ಪಿ ಸಮ್ಮೋ ಅವರು ಹಿಂದೂಗಳಿಗೆ ಸೂಕ್ತ ರಕ್ಷಣೆ ಒದಗಿಸುವ ಭರವಸೆ ನೀಡಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.