



ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮಹಿಳಾ ಪ್ರಯಾಣಿಕರ ಸುರಕ್ಷತೆಯ ದೃಷ್ಠಿಯಿಂದ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಟ್ರ್ಯಾಕಿಂಗ್ ಸಾಧನಗಳನ್ನು ಅಳವಡಿಸಲು ನಿರ್ಧರಿಸಿದೆ.
ಸಮಸ್ಯೆಗಳು ಉಂಟಾದಾಗ ಪ್ರಯಾಣಿಕರು ಒಮ್ಮೆ ಪ್ಯಾನಿಕ್ ಬಟನ್ ಒತ್ತಿದರೇ, ಕೆಎಸ್‌ಆರ್‌ಟಿಸಿಯ ಕೇಂದ್ರೀಕೃತ ನಿಯಂತ್ರಣ ಕೊಠಡಿಗೆ ಸಂದೇಶ ರವಾನೆಯಾಗುತ್ತದೆ. ಆಗ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸಿಬ್ಬಂದಿ ಜಿಪಿಎಸ್ ಮೂಲಕ ಬಸ್ ಸ್ಥಳವನ್ನು ಟ್ರ್ಯಾಕ್ ಮಾಡುತ್ತಾರೆ. ನಂತರ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುತ್ತಾರೆ.
ಕೇಂದ್ರೀಕೃತ ನಿಯಂತ್ರಿತ ಕೊಠಡಿ, ಪ್ಯಾನಿಕ್ ಬಟನ್ ಮತ್ತು ರಿಯಲ್ ಟೈಮ್ ವೆಹಿಕಲ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 30.74 ಕೋಟಿ ರೂ. ಬಿಡುಗಡೆಗೊಳಲಾಗಿದೆ. ಈ ವ್ಯವಸ್ಥೆಯಿಂದ ನಿಯಂತ್ರಣ ಕೊಠಡಿಯಲ್ಲಿ ಕುಳಿತು, ನಾವು ಬಸ್ ಇರುವ ಸ್ಥಳ, ಬಸ್ ಹೋಗುವ ವೇಗವನ್ನು ತಿಳಿಯಬಹುದು ಎಂದು ಕೆಸ್ಆರ್ಟಿಸಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ ಕೆಎಸ್‌ಆರ್‌ಟಿಸಿಯ ಪ್ರೀಮಿಯಂ ಮತ್ತು ಪ್ರೀಮಿಯಂ ಅಲ್ಲದ ಎಲ್ಲ 8,000 ಬಸ್‌ಗಳಲ್ಲಿ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಸೌಲಭ್ಯವನ್ನು ಅಳವಡಿಸಲಾಗುವುದು. ಈ ಯೋಜನೆಗೆ ಮೂರನೇ ಎರಡರಷ್ಟು ವೆಚ್ಚ (ಮುಕ್ಕಾಲು ಭಾಗ) ಕೇಂದ್ರ ಸರ್ಕಾರ ಮತ್ತು ಮೂರನೇ ಒಂದು (ಕಾಲುಭಾಗ) ವೆಚ್ಚವನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ. ಬೆಂಗಳೂರಿನಲ್ಲಿ ಕೇಂದ್ರೀಕೃತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.