logo
WhatsApp Image 2026-04-02 at 14.46.04.jpeg
hindalco everlast.jpeg

ಅಂತರ್ಜಾತಿ ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳು ರಸ್ತೆಯ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ..!

ಟ್ರೆಂಡಿಂಗ್
share whatsappshare facebookshare telegram
2 Aug 2024
post image

ಬಳ್ಳಾರಿ: ಅಂತರ್ಜಾತಿ ಮದುವೆಗೆ ಪೋಷಕರು ವಿರೋಧಿಸಿದರೆಂದು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ರಾಜ (23) ಹಾಗೂ ಪವಿತ್ರ (20) ಮೃತ ದುರ್ದೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳು. ಸಿರಗುಪ್ಪದ ಆದೋನಿ ರಸ್ತೆಯ ಜಮೀನೊಂದರಲ್ಲಿ ರಾಜ ಹಾಗೂ ಪವಿತ್ರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರೇಮಿಗಳು ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು. ಇದೇ ಕಾರಣಕ್ಕೆ ತಡರಾತ್ರಿ ಮನೆ ಬಿಟ್ಟು ಬಂದಿದ್ದ ಜೋಡಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.