logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ತಂದೆ–ತಾಯಿಯರೇ ಮಕ್ಕಳ ಮೊದಲ ಗುರುಗಳು: ಡಾ. ಕೃಷ್ಣ ಪ್ರಸಾದ್ ಕೂಡ್ಲು

ಟ್ರೆಂಡಿಂಗ್
share whatsappshare facebookshare telegram
13 Dec 2025
post image

ಬ್ರಹ್ಮಾವರ: ತಂದೆ–ತಾಯಿಯರೇ ಮಕ್ಕಳ ಮೊದಲ ಗುರುಗಳು. ಮಕ್ಕಳು ಶಿಕ್ಷಕರಿಗೆ ಕೃತಜ್ಞರಾಗಿರುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಸಾದ್ ನೇತ್ರಾಲಯದ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರು ಹೇಳಿದರು.

ಅವರು ಬ್ರಹ್ಮಾವರ ತಾಲೂಕಿನ ನಡೂರಿನಲ್ಲಿ ರತ್ನಶೀಲ ಎಜುಕೇಶನ್ ಟ್ರಸ್ಟ್ (ರಿ) ಹಾಗೂ ಗ್ರಾವಿಟಿ ಇಂಗ್ಲಿಷ್ ಮಾಧ್ಯಮ ಶಾಲೆ, ನಡೂರು ಇವರ ವತಿಯಿಂದ ಆಯೋಜಿಸಲಾದ ಗ್ರಾವಿಟಿ ಜುಬಿಲಿಯನ್ಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಸಂಸ್ಕಾರ ಕಲಿಸುವುದು ಅತ್ಯಂತ ಅಗತ್ಯವಾಗಿದೆ. ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಬಾರದು. ಅಂಕಗಳನ್ನಷ್ಟೇ ಮುಖ್ಯವೆಂದು ಪರಿಗಣಿಸಿ ಮಕ್ಕಳ ಸಾಮರ್ಥ್ಯವನ್ನು ಅಳೆಯಬಾರದು; ಬದಲಾಗಿ ಅವರ ಪರಿಶ್ರಮ ಮತ್ತು ಆಸಕ್ತಿಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು. ಶಾಲೆ, ಶಿಕ್ಷಕರು ಹಾಗೂ ಹಿರಿಯರ ಬಗ್ಗೆ ಗೌರವವನ್ನು ರೂಢಿಸಿಕೊಳ್ಳಬೇಕು. ಉತ್ತಮ ಹವ್ಯಾಸಗಳು, ಸಮಯಪ್ರಜ್ಞೆ ಹಾಗೂ ಶಿಸ್ತು ಜೀವನದ ಅವಿಭಾಜ್ಯ ಅಂಗಗಳಾಗಬೇಕು ಎಂದು ಅವರು ಸಲಹೆ ನೀಡಿದರು. ಶಿಕ್ಷಕ ವೃತ್ತಿಯನ್ನು ಸೇವಾಭಾವದಿಂದ ನಿರ್ವಹಿಸಿದರೆ ಆತ್ಮತೃಪ್ತಿ ದೊರೆಯುತ್ತದೆ. ಗ್ರಾವಿಟಿ ಶಾಲೆ ಮುಂದಿನ ದಿನಗಳಲ್ಲಿ ಉಭಯ ಜಿಲ್ಲೆಗಳಲ್ಲಿಯೂ ಉತ್ತಮ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಇಂದಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಶೇ.40ರಷ್ಟು ಮಕ್ಕಳಿಗೆ ದೃಷ್ಟಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು. ಶಾಲೆಯ ಟ್ರಸ್ಟಿಗಳಾದ ಮನೋಹರ ಹೆಗ್ಡೆ (ಮನು ಹಂದಾಡಿ) ಮಾತನಾಡಿ, ಜೀವನದಲ್ಲಿ ಸೋತು ಗೆಲ್ಲುವ ಮನೋಭಾವವನ್ನು ಬೆಳೆಸುವುದು ಶಾಲಾ ಹಂತದಲ್ಲಿಯೇ ಆರಂಭವಾಗಬೇಕು. ಮಕ್ಕಳ ಮನೋವಿಕಾಸಕ್ಕೆ ಸಹಕಾರಿಯಾಗುವಂತೆ ಚೆಸ್ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ಶಾಲೆಯಲ್ಲಿ ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸುಮಾಲತಾ ಶೆಟ್ಟಿ ವಾರ್ಷಿಕ ವರದಿಯನ್ನು ವಾಚಿಸಿ ಮಾತನಾಡಿ, ವಿದ್ಯಾರ್ಥಿಗಳ ಸಕ್ರಿಯ ಸಹಕಾರದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಒಳಗೊಂಡಂತೆ ವಿವಿಧ ವಿಷಯಗಳ ಕುರಿತು ತಿಳುವಳಿಕೆ ನೀಡಲಾಗುತ್ತಿದೆ. ಇದರ ಪರಿಣಾಮವಾಗಿ ಮಕ್ಕಳಲ್ಲಿ ಮೌಲ್ಯಾಧಾರಿತ ಬೆಳವಣಿಗೆ ಕಂಡುಬರುತ್ತಿದ್ದು, ಇಂತಹ ಕಾರ್ಯಕ್ರಮಗಳು ಅವರನ್ನು ಯಶಸ್ವಿ ಹಾಗೂ ಸಜ್ಜನ ನಾಗರಿಕರಾಗಿ ರೂಪಿಸಲು ಸಹಕಾರಿಯಾಗುತ್ತಿವೆ ಎಂದು ಹೇಳಿದರು. ಸಭೆಯಲ್ಲಿ ಕಾರ್ಯದರ್ಶಿ ಪಾವನ ಎಂ. ಹೆಗ್ಡೆ, ಸಂಗೀತ ಅಡಿಗ, ಸರಸ್ವತಿ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಡಾ. ಕೃಷ್ಣ ಪ್ರಸಾದ್ ಕೂಡ್ಲು ಹಾಗೂ ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.