logo
WhatsApp Image 2026-04-02 at 14.46.04.jpeg
hindalco everlast.jpeg

ಇರಿಗೆ ಸರ್ಕಾರಿ ಶಾಲೆಯಲ್ಲಿ ಪೋಷಕರ ಸಭೆ: ವಿದ್ಯಾರ್ಥಿಗಳಿಗೆ ಸಮವಸ್ತ್ರ, ಬ್ಯಾಗ್, ನೋಟ್‌ಬುಕ್ ವಿತರಣೆ

ಟ್ರೆಂಡಿಂಗ್
share whatsappshare facebookshare telegram
17 Jul 2026
post image

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಇರಿಗೆದಲ್ಲಿ ಜುಲೈ 15ರಂದು ಪೋಷಕರ ಸಭೆಯನ್ನು ನಡೆಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ವೆಂಕಪ್ಪ ಉಪ್ಪಾರ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮುಖ್ಯೋಪಾಧ್ಯಾಯ ಯೋಗೇಶ್ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಶಿಕ್ಷಣ ಸಂಯೋಜಕ ವೆಂಕಪ್ಪ ಉಪ್ಪಾರ ಅವರು ವಿದ್ಯಾರ್ಥಿಗಳಿಗೆ ಶಿಸ್ತು, ಜ್ಞಾನದ ಮಹತ್ವ ಹಾಗೂ ಉತ್ತಮ ಜೀವನ ಮೌಲ್ಯಗಳ ಕುರಿತು ಸಂದೇಶ ನೀಡಿದರು. ಪೋಷಕರ ಸಭೆಯಲ್ಲಿ ಶಾಲೆಯ ಶೈಕ್ಷಣಿಕ ಪ್ರಗತಿ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ನೀಡಿ, ಪೋಷಕರ ಸಹಕಾರದ ಅಗತ್ಯವನ್ನು ತಿಳಿಸಿದರು.

ಮುಖ್ಯೋಪಾಧ್ಯಾಯ ಯೋಗೇಶ್ ಅವರು ಶಾಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಾಯ್‌ಫುಲ್ ಇಂಗ್ಲಿಷ್ ಲರ್ನಿಂಗ್ ಕಾರ್ಯಕ್ರಮದ ಉದ್ದೇಶ ಹಾಗೂ ಅದರ ಪ್ರಯೋಜನಗಳ ಕುರಿತು ವಿವರಿಸಿದರು.

ಇದೇ ಸಂದರ್ಭದಲ್ಲಿ ದಾನಿಗಳ ಸಹಕಾರದಿಂದ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ಹಾಗೂ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು. ಸಮವಸ್ತ್ರವನ್ನು ಲಲಿತ ತಿಮ್ಮಪ್ಪ ಹಾಗೂ ಪುತ್ರ ರಮೇಶ್, ಶಾಲಾ ಬ್ಯಾಗ್‌ಗಳನ್ನು ಜಯ ಸುಧಾಕರ್ ಪೂಜಾರಿ ಹಾಗೂ ನೋಟ್‌ಬುಕ್‌ಗಳನ್ನು ಮುತ್ತು ಚಂದ್ರ ದಾನವಾಗಿ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ಸಹ ಶಿಕ್ಷಕಿ ಪ್ರಿಯದರ್ಶಿನಿ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರೆ, ಸಹ ಶಿಕ್ಷಕಿ ಪ್ರಗತಿ ವಂದನಾರ್ಪಣೆ ಸಲ್ಲಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.