



ಮಣಿಪಾಲ: ಕೆಳಪರ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಕ್ರಿಟ್ ರಸ್ತೆಯಿಂದ ಡಾಮಾರು ರಸ್ತೆಗೆ ಸಂಪರ್ಕ ಸಾಧಿಸುವ ತಿರುವಿನಲ್ಲಿ ಭಾರಿ ಗಾತ್ರದ ಕಂಟೈನರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮನೆಗೆ ಉರುಳಿಬಿದ್ದ ಘಟನೆ ಭಾನುವಾರ ರಾತ್ರಿ ನಡೆದಿದೆ. ನಿನ್ನೆ ರಾತ್ರಿ ಪರ್ಕಳದಿಂದ ಗೋವಾ ಕಡೆಗೆ ರದ್ದಿ ಪೇಪರ್ ತೆಗೆದುಕೊಂಡು ಹೋಗುತ್ತಿದ್ದ ಕಂಟೈನರ್ ಪರ್ಕಳದ ಶೆಣೈ ಕಂಪೌಂಡ್ ಮೇಲೆ ಮಗುಚಿ ಬಿದ್ದಿದೆ. ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಬಚಾವ್ ಆಗಿದ್ದಾನೆ. ಸದ್ಯ ಈ ಮನೆಯಲ್ಲಿ ಯಾರು ವಾಸು ಮಾಡುತ್ತಿಲ್ಲ. ಹೀಗಾಗಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಈ ಭಾಗದಲ್ಲಿ ಸೂಕ್ತ ದಾರಿದೀಪ, ನಾಮ ಫಲಕದ ವ್ಯವಸ್ಥೆ ಇಲ್ಲ. ಹೀಗಾಗಿ ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದೆ. ಈ ಹಿಂದೆಯೂ ಇದೇ ಸ್ಥಳದಲ್ಲಿ ಟ್ಯಾಂಕರ್, ಲಾರಿ ಉರುಳಿಬಿದ್ದಿತ್ತು. ಹಾಗಾಗಿ ಕೂಡಲೇ ದಾರಿ ದೀಪದ ವ್ಯವಸ್ಥೆ ಮಾಡಬೇಕು..ತಿರುವು ಇರುವ ಬಗ್ಗೆ ಸೂಚನೆ ನೀಡುವ ನಾಮಫಲಕ ಅಳವಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.