logo
WhatsApp Image 2026-04-02 at 14.46.04.jpeg
hindalco everlast.jpeg

ಬ್ಲೂ ಫಿಲ್ಮ್ ತಾರೆಗೆ ಹಣ ಸಂದಾಯ ಪ್ರಕರಣ: ಅಮೆರಿಕ ಮಾಜಿ‌ ಅಧ್ಯಕ್ಷ ಟ್ರಂಪ್ ಬಂಧನ

ಟ್ರೆಂಡಿಂಗ್
share whatsappshare facebookshare telegram
15 Jun 2023
post image

ನ್ಯೂಯಾರ್ಕ್:ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣ ಹಿನ್ನೆಲೆಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮ್ಯಾನ್‌ಹಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ 76 ವರ್ಷ ವಯಸ್ಸಿನ ಟ್ರಂಪ್‌ ಮಂಗಳವಾರ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದೊಯ್ಯಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ, ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌. ನಮ್ಮ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು’ ಎಂದು ನೀಲಿಚಿತ್ರ ತಾರೆಯೊಬ್ಬರಿಗೆ ಹಣ ಸಂದಾಯ ಮಾಡಿದ್ದ ಕುರಿತಂತೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.

ಟ್ರಂಪ್‌ 2024ರ ಅಧ್ಯಕ್ಷೀಯ ಚುನಾವಣೆ ಸಿದ್ಧತೆಯಲ್ಲಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿರುವುದರಿಂದ ಈ ಬೆಳವಣಿಗೆ ಅಮೆರಿಕದಲ್ಲಿ ರಾಜಕೀಯ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.