



ಕಾಪು: ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೃತಪಟ್ಟ ಘಟನೆ ಕಾಪು ಪಾಂಗಾಳ ಗುಡ್ಡೆ ರಾ.ಹೆ. 66ರಲ್ಲಿ ಆ.29ರಂದು ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ 50ವರ್ಷದ ಸುರೇಶ್ ಶೇರಿಗಾರ್ ಎಂದು ಗುರುತಿಸಲಾಗಿದೆ. ಇವರು ಪಾಂಗಾಳ ಗುಡ್ಡೆ ರಸ್ತೆಯ ಕಡೆಯಿಂದ ಮಂಗಳೂರು-ಉಡುಪಿ ಏಕಮುಖ ರಸ್ತೆಯನ್ನು ದಾಟುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸುರೇಶ್ ಶೇರಿಗಾರ್ ಗಂಭೀರವಾಗಿ ಗಾಯಗೊಂಡು ಪ್ರಜ್ಞೆತಪ್ಪಿ ಬಿದ್ದಿದ್ದು, ಕೂಡಲೇ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಅದಾಗಲೇ ಅವರು ಉಸಿರುಚೆಲ್ಲಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.