logo
WhatsApp Image 2026-04-02 at 14.46.04.jpeg
hindalco everlast.jpeg

ಪೆರಂಪಳ್ಳಿಯಲ್ಲಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಟ್ರೆಂಡಿಂಗ್
share whatsappshare facebookshare telegram
5 Sept 2022
post image

ಮಣಿಪಾಲ:

ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ.3ರಂದು ಬೆಳಗ್ಗೆ ಪೆರಂಪಳ್ಳಿಯ ರಕ್ತೇಶ್ವರಿ ಜ್ಯೊತಿಷ್ಯಾಲಯದ ಎದುರುಗಡೆ ನಡೆದಿದೆ. ಮೃತರನ್ನು ಪೆರಂಪಳ್ಳಿಯ ವಿನೋದ್ ಎಂದು ಗುರುತಿಸಲಾಗಿದೆ. ಪೆರಂಪಳ್ಳಿ ಶಂಕರಾನಂದ ಆಶ್ರಮ ಕಡೆಯಿಂದ ಪೆರಂಪಳ್ಳಿ ಚರ್ಚ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇವರಿಗೆ, ಪೆರಂಪಳ್ಳಿ ಕಡೆಯಿಂದ ಬಂದ ಕಾರು ಢಿಕ್ಕಿ ಹೊಡಿದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವಿನೋದ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.