



ಬೆಂಗಳೂರು:ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲೂ ಕನ್ನಡಿಗರಿಗೆ ಹೆಚ್ಚು ಉದ್ಯೋಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.