logo
WhatsApp Image 2026-04-02 at 14.46.04.jpeg
hindalco everlast.jpeg

ಪೆರ್ಡೂರು: ರಸ್ತೆ ಅಪಘಾತ - ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ..!

ಟ್ರೆಂಡಿಂಗ್
share whatsappshare facebookshare telegram
7 Sept 2025
post image

ಉಡುಪಿ: ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೆ.6ರಂದು ಬೆಳಗ್ಗೆ ನಡೆದಿದೆ.

ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಅಮೃತ ಭಾರತಿ ಶಾಲೆಯ ಬಸ್, ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಮೇತ ರಸ್ತೆ ಬಿದ್ದರು. ಇದರಿಂದ ಗಂಭೀರ ವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಗಾಯಗೊಂಡ ಸುದರ್ಶನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.