



ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್ 12 ರಿಂದ ಮಾರ್ಚ್ 19 ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ರಥರೋಹಣ, ಅನ್ನಸಂತರ್ಪಣೆ ಮತ್ತು ಸಂಜೆ 6.30 ಕ್ಕೆ ಶ್ರೀ ಮನ್ಮಹಾರಥೋತ್ಸವ ನಡೆಯಲಿದ್ದು ಈ ಸಮಯ ಕೆಲವರು ಮದ್ಯಪಾನ ಸೇವಿಸಿ ಬಂದು ಕಾನೂನು ಸುವ್ಯಸ್ಥೆಗೆ ಧಕ್ಕೆವುಂಟಾಗುವ ಹಿನ್ನಲೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದಲ್ಲಿ ಮಾರ್ಚ್ 16 ರ ಬೆಳಗ್ಗೆ 6 ಗಂಟೆಯಿ೦ದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಹಿರಿಯಡಕ ಪೊಲೀಸ್ ಠಾಣಾ ಸರಹದ್ದಿನ ಪೆರ್ಡೂರು ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ಪೈನ್ ಶಾಪ್ ಗಳ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.