



ನವದೆಹಲಿ : ದೇಶಾದ್ಯಂತ ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.ಇಂದು ಪೆಟ್ರೋಲ್ ಬೆಲೆ 35 ಪೈಸೆ ಹೆಚ್ಚಳವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 107.94 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್ ದರ 96.67 ರೂ.ಗೆ ಮಾರಾಟವಾಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.80 ರೂ ಇದ್ರೆ, ಲೀಟರ್ ಡೀಸೆಲ್ ದರ 104.75 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.46 ರೂ.ಗೆ ಏರಿಕೆಯಾದ್ರೆ, ಲೀಟರ್ ಡೀಸೆಲ್ ದರ 99.78 ರೂಪಾಯಿಗೆ ಮಾರಾಟವಾಗುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.