



ನವದೆಹಲಿ: ಇಂದು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್‌ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ.
ನಿತ್ಯವೂ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ ಆಗುತ್ತಲೇ ಇದೆ. 9 ದಿನದಲ್ಲಿ ಇಂದು 8ನೇ ಬಾರಿಗೆ ಪೆಟ್ರೋಲ್ ಬೆಲೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು ಲೀಟರ್ ಗೆ 30 ಪೈಸೆಗಿಂತ ಅಧಿಕವಾಗಿದೆ. ನಿನ್ನೆ ಲೀಟರ್ ಗೆ 105.62 ರೂ. ಇದ್ದದ್ದು ಇಂದು 105.94 ರೂ. ಏರಿಕೆ ಕಂಡಿದೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯದಿಂದ ಜಾಗತಿಕ ತೈಲ ಬೆಲೆಗಳು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.