



ಕಾರ್ಕಳ : ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೇರ್‍ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿಲ್ಲ ಎಂದು ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಂ. ವೀರಪ್ವ ಮೊಯ್ಲಿ ಹೇಳಿದರು.
ಪ್ರವಾಸಿ ಮಂದಿರದಲ್ಲಿ ಬುಧವಾರ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕವಿಡದ ಈ ನಿಧಿಯೇ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಪ್ರತಿಬಿಂಬಿಸುತ್ತದೆ. ಪಕ್ಷ ಸಂಘಟನೆಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲರೂ ಒಗ್ಗೂಡಿದ್ದು ಗಾಂಧಿ ನಡಿಗೆ ಎಂಬ ಕಾರ್ಯಕ್ರಮದ ಮೂಲಕ ಸಂಘಟನೆ ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದರು ಪೆಟ್ರೋಲಿಯಂ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಿದೆ. ನಾನು ಸಚಿವನಾಗಿದ್ದಾಗ ಕಚ್ಚಾತೈಲ ದರ ಗರಿಷ್ಠ ಮಟ್ಟದಲ್ಲಿತ್ತು. ಈಗಿನ ಕಚ್ಚಾ ತೈಲಬೆಲೆಗೆ ಇಷ್ಟೊಂದು ಬೆಲೆ ದುಬಾರಿಯಾಗಿದ್ದು, ಇದನ್ನು ನಿಯಂತ್ರಿಸುವುದು ಕೇಂದ್ರ ಸರ್ಕಾರಕ್ಕೆ ಸಾಧ್ಯವಿದೆ. ನಾವು ಅಧಿಕಾರದಲ್ಲಿದ್ದಾಗ ಅಡುಗೆ ಅನಿಲದ ಬೆಲೆ ರೂ. ೭೫೦ ವಿತ್ತು. ಆದರೆ ಸಬ್ಸಿಡಿ ನೀಡುವ ಮೂಲಕ ರೂ. ೩೫೦ಕ್ಕೆ ನೀಡಿದ್ದೆವು. ಕೇಂದ್ರ ಅಬಕಾರಿ ಸುಂಕ ವ್ಯಾಟ್ ಹಾಕುವ ಮೂಲಕ ಜನರ ಮೇಲೆ ಹೊರೆಯಾಗುವಂತೆ ಮಾಡಿದೆ. ಪೆಟ್ರೋಲಿಯಂ ಉತ್ವನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತಿದೆ ಎಂದರು. ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಯಾವುದೇ ಭಿನ್ನಮತವಿಲ್ಲ. ಗೇಣಿದಾರರ ಕಾನೂನಿನಿಂದ ೩೫ ಲಕ್ಷ ಜನರು ಫಲಾನುಭವಿಗಳಿದ್ದರು. ಭೂಮಸೂದೆ ಹಾಗೂ ಅಕ್ರಮಸಕ್ರಮಗಳ ಮೂಲಕ ಜನರಿಗೆ ವಸತಿ ನೀಡಿದ್ದು ಕಾಂಗ್ರೆಸ್ ಪಕ್ಷದ ಕೊಡುಗೆ. ಕಾಂಗ್ರೆಸ್ ಯೋಜನೆಗಳ ಬಗ್ಗೆ ಅರಿವಿನ ಕೊರತೆ ನೀಗಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು. ಡೀಮ್ಡ್ ಅರಣ್ಯ ವಿಷಯದಲ್ಲಿ ನಮ್ಮ ಸರ್ಕಾರವಿದ್ದಾಗ ಶಾಸಕರು, ಸಚಿವರ ಸಮಿತಿ ರಚಿಸಿ ವರದಿ ತಯಾರಿಸಿದ್ದು, ಈಗಿನ ರಾಜ್ಯ ಸರ್ಕಾರ ಈ ಬಗ್ಗೆ ಒಂದು ಸಭೆಯನ್ನೂ ನಡೆಸಿಲ್ಲ’ ಎಂದು ದೂರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಉಪಸ್ಥಿತರಿಎಂದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.