



ಮಂಡ್ಯ: ಬಹು ನಿರೀಕ್ಷಿತ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ನಾಳೆ ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಪ್ರೆಸ್ ವೇ ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ಮತ್ತು ಮೈಸೂರು ಸಂಪರ್ಕಿಸುವ ಈ ಹೆದ್ದಾರಿಯನ್ನು 8480 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಇದು 118 ಕಿಲೋ ಮೀಟರ್ ಉದ್ದವಾಗಿದ್ದು, 75 ನಿಮಿಷದಲ್ಲಿ ಬೆಂಗಳೂರಿನಿಂದ ಮೈಸೂರು ತಲುಪಲು ಸಾಧ್ಯವಾಗಲಿದೆ.
ರಾಜ್ಯದ ಜನರ ಜತೆಗೆ ಇದು ಕೇರಳದ ಜನರಿಗೆ ಕೂಡ ಪ್ರಯೋಜನಕಾರಿಯಾಗಿದೆ. ಕೇರಳದ ಕಣ್ಣೂರು, ಕೋಝಿಕೋಡ್ ನಾಗರಿಕರು ಮೈಸೂರು ಮೂಲಕ ಕೇರಳಕ್ಕೆ ತೆರಳುತ್ತಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ಹೆದ್ದಾರಿ ನಿರ್ಮಾಣವನ್ನು ಪ್ರಮುಖವಾಗಿ ಪ್ರಸ್ತಾಪಿಸಲು ಬಿಜೆಪಿ ಸಿದ್ದತೆ ನಡೆಸಿದೆ. ಕ್ರೆಡಿಟ್ ವಾರ್ ಮೂರು ಪಕ್ಷಗಳಲ್ಲಿ ಆರಂಭವಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.