logo
WhatsApp Image 2026-04-02 at 14.46.04.jpeg
hindalco everlast.jpeg

ಯು ಪಿ ಎಂ ಸಿ ಯಲ್ಲಿ ಕವಿಗೋಷ್ಠಿ

ಟ್ರೆಂಡಿಂಗ್
share whatsappshare facebookshare telegram
19 Oct 2023
post image

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಕುಂಜಿಬೆಟ್ಟು ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿಯನ್ನು ಇದೇ ಬರುವ 21 ಅಕ್ಟೋಬರ್ ಶನಿವಾರ ಬೆಳಗ್ಗೆ 11:30ಕ್ಕೆ ಆಯೋಜಿಸಲಾಗಿದೆ .

ಕವಿಗೋಷ್ಠಿಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಆಶಾ ಕುಮಾರಿ ವಹಿಸಲಿದ್ದು, ಸಭಾಧ್ಯಕ್ಷತೆಯನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ ವಹಿಸಲಿದ್ದಾರೆ .ಮುಖ್ಯ ಅತಿಥಿಗಳಾಗಿ ಕಸಾಪ ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ ಮನೋಹರ್, ಕವಿಗೋಷ್ಠಿಯ ಸಂಚಾಲಕರಾದ ಉಪನ್ಯಾಸಕ ರಾಘವೇಂದ್ರ ಜಿ.ಜಿ , ಕವಿಗೋಷ್ಠಿಯ ಆಶಯ ನುಡಿಯನ್ನು ಕವಯಿತ್ರಿ ಪೂರ್ಣಿಮಾ ಸುರೇಶ್ ನಿರ್ವಹಿಸಲಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ರಂಗನಟ ರಾಜೇಶ್ ಭಟ್ ಪಣಿಯಾಡಿ ವಹಿಸಲಿದ್ದು, ಸುಮಾರು 11 ಯುವ ಕವಿಗಳು ಭಾಗವಹಿಸಲಿದ್ದಾರೆ. ಎಂದು ಕ ಸಾ ಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಹಾಗೂ ರಂಜಿನಿ ವಸಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.