logo
WhatsApp Image 2026-04-02 at 14.46.04.jpeg
hindalco everlast.jpeg

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
2 Aug 2023
post image

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾoಶದ ಮೂಲಕ ಪಿ.ಯು.ಸಿ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂರವಾಣಿ : 0820-2574596 ಅಥವಾ ಕಾರ್ಕಳ ದೂರವಾಣಿ : 08258-231101 ಹಾಗೂ ಕುಂದಾಪುರ ದೂರವಾಣಿ : 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.