

ಉಡುಪಿ: ಪ್ರಸಕ್ತಸಾಲಿಗೆ ಉಡುಪಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರವಿದ್ಯಾರ್ಥಿನಿಲಯ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30. ಅರ್ಜಿ ಸಲ್ಲಿಸಲು ತೊಂದರೆಗಳಾದಲ್ಲಿ bcwdhelpline@gmail.com ಹಾಗೂ ಹೆಚ್ಚಿನ ವಿವರಗಳಿಗಾಗಿ https://bcwd.karnataka.gov.in ಅನ್ನುಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.