logo
WhatsApp Image 2026-04-02 at 14.46.04.jpeg
hindalco everlast.jpeg

ಮನೋವೈದ್ಯರ ಹುದ್ದೆ: ನೇರ ಸಂದರ್ಶನ

ಟ್ರೆಂಡಿಂಗ್
share whatsappshare facebookshare telegram
9 Aug 2023
post image

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ -ಜಿಲ್ಲಾ ಮಾನಸಿಕ ಆರೋಗ್ಯ‌ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 14 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಮನೋವೈದ್ಯ ಶಾಸ್ತ್ರದಲ್ಲಿ ಎಂ.ಬಿ.ಬಿ.ಎಸ್ ಮತ್ತು ಎಂ.ಡಿ ಪದವಿ ಅಥವಾ ಮನೋವೈದ್ಯ ಶಾಸ್ತ್ರದಲ್ಲಿ ಡಿ.ಎನ್.ಬಿ ಪದವಿ ಅಥವಾ ಎಂ.ಸಿ.ಐ ನಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಡಿ.ಪಿ.ಎಮ್ ಪದವಿ ಹೊಂದಿರುವ ಹಾಗೂ ಯಾವುದೇ ಆಸ್ಪತ್ರೆಯಲ್ಲಿ ಮನೋವೈದ್ಯರಾಗಿ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.