



ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 29, 2021ರಿಂದ ನಿಗದಿಯಾಗಿದ್ದ ದ್ವಿತೀಯ ಪಿಯು ವಿದ್ಯಾರ್ಥಿಗಳ ಅರ್ಧ ವಾರ್ಷಿಕ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಮುಂದೂಡಿದ್ದು, ಹೊಸ ದಿನಾಂಕ ಪ್ರಕಟಿಸಿದೆ, ಮಧ್ಯಂತರ ಪರೀಕ್ಷೆಗಳು ಡಿಸೆಂಬರ್ 13 ರಿಂದ ಡಿಸೆಂಬರ್ 24ರ ನಡುವೆ ನಡೆಯಲಿವೆ. ಪರೀಕ್ಷೆಗಳು ರಾಜ್ಯದಾದ್ಯಂತ ನಿಯೋಜಿತ ಕೇಂದ್ರಗಳಲ್ಲಿ ನಡೆಯಲಿವೆ. ನಿಗದಿತ ವರದಿ ಮಾಡುವ ಸಮಯಕ್ಕೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ ವಾಗಿದೆ.
ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನ ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ಸರಕಾರ ಮುಂದಾಗಿದ್ದು, ಇದಕ್ಕೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು . ಉಪನ್ಯಾಸಕರು ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅರ್ಧ ವಾರ್ಷಿಕ ಪರೀಕ್ಷೆಯನ್ನ ಮುಂದೂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.