logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಜಿಲ್ಲೆಯ ವಿವಿಧಡೆ ಮೇ.25, 26 ರಂದು ವಿದ್ಯುತ್ ವ್ಯತ್ಯಯ

ಟ್ರೆಂಡಿಂಗ್
share whatsappshare facebookshare telegram
24 May 2023
post image

ಉಡುಪಿ, ಮೇ 24: ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಬೊಳ್ಜೆ ಮತ್ತು ಮೇಲ್ಪೇಟೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೊರಂಗ್ರಪಾಡಿ, ಬೊಳ್ಜೆ, ಕೇದಾರ್, ಕೆಮ್ತೂರು, ಕಟಪಾಡಿ, ಮಠದಂಗಡಿ, ಅಂಕುದ್ರು, ಬೋಳಾರ್ ಗುಡ್ಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 25 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಲೈನ್ ಶಿಫ್ಟಿಂಗ್ ಕಾಮಗಾರಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್, ಕೆ.ಹೆಚ್.ಬಿ, ಪದವು ಮತ್ತು ನಕ್ರೆ ಫೀಡರ್‌ನಲ್ಲಿ ಬೈಲೂರು, ಜಾರ್ಕಳ, ಪಳ್ಳಿ, ನೀರೆ, ಎರ್ಲಪಾಡಿ, ಕೌಡೂರು, ಕುಂಟಾಡಿ, ಆನಂದಿ ಮೈದಾನ, ನಕ್ರೆ, ಪರಪು, ಗುಂಡ್ಯಡ್ಕ, ಬೋರ್ಗಲ್ ಗುಡ್ಡೆ, ಪೊಸನೊಟ್ಟು, ಕೆ.ಹೆಚ್.ಬಿ. ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 26 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.