



ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಬರಲು ಯಾವುದೇ ವಿರೋಧವಿಲ್ಲ. ಆದರೆ, ಅವರನ್ನು ಏಕಾಏಕಿಯಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈ ಹಿಂದೆ ನಮಗೆ ಎರಡ್ಮೂರು ಬಾರಿ ಕಹಿ ಅನುಭವ ಆಗಿದೆ. ದನ ಬಂದರೆ ಕರು ಬರುತ್ತದೆ ಎಂದು ಹೇಳಿದ್ದರು. ಆದರೆ ಅದು ಆಗಿಲ್ಲ. ಅವರ ಮಾನಸಿಕತೆ ಯಾವ ರೀತಿ ಇದೆ ಎಂದು ಗೊತ್ತಿಲ್ಲ. ಪದೇ ಪದೇ ತನ್ನ ಮನಸ್ಥಿತಿ ಬದಲಾಯಿಸುತ್ತಾರೆ. ಹೀಗಾಗಿ ಏನು ಮಾಡಲು ಆಗಲ್ಲ ಎಂದರು. ಬಿಜೆಪಿ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ, ನಾವು ಅವರನ್ನು ಸ್ವಾಗತಿಸುತ್ತೇವೆ. ಆದರೆ ಅವರನ್ನು ಏಕಾಏಕಿಯಾಗಿ ಪಕ್ಷಕ್ಕೆ ತೆಗೆದುಕೊಳ್ಳಲು ಆಗಲ್ಲ. ಈ ಬಗ್ಗೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ಜೊತೆಗೆ ಚರ್ಚಿಸಬೇಕು. ವರಿಷ್ಠರು ನಿರ್ಧಾರ ಮಾಡಬೇಕು. ಆದರೆ ಅವರು ಪಕ್ಷಕ್ಕೆ ಬರುವುದಕ್ಕೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.