logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ ಕ್ರಿಯೇಟಿವ್‌ ಕಾಲೇಜಿನ ಎನ್.ಎಸ್.ಎಸ್‌ ಶಿಬಿರದ ಪೂರ್ವಭಾವಿ ಸಭೆ

ಟ್ರೆಂಡಿಂಗ್
share whatsappshare facebookshare telegram
5 Oct 2023
post image

ಕಾರ್ಕಳ: ಕಾರ್ಕಳದ ಮೂರೂರಿನಲ್ಲಿ ಅ.12 ರಿಂದ 18 ರವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್‌ ಕಾಲೇಜಿನ ಎನ್‌.ಎಸ್‌.ಎಸ್‌ ಶಿಬಿರವು ನಡೆಯಲಿದೆ. ಸೆ.30 ರಂದು ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ನಡೆಯಿತು. ಕ್ರಿಯೇಟಿವ್‌ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಯವರು ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಊರಿನ ಗಣ್ಯರಲ್ಲಿ ಶಿಬಿರದ ಎಲ್ಲ ಕೆಲಸ ಕಾರ್ಯಗಳಲ್ಲಿ ತನು-ಮನ-ಧನ ಸಹಾಯ ಮತ್ತು ಸಹಕಾರ ಕೋರಿದರು.

ಶಿಬಿರದ ಸಂಯೋಜಕರಾದ ಉಪನ್ಯಾಸಕ ಉಮೇಶ್‌ ರವರು ಪೂರ್ವ ತಯಾರಿ ಮತ್ತು ಶಿಬಿರದಲ್ಲಿ ಅಗತ್ಯತೆ ಮತ್ತು ಖರ್ಚು ವೆಚ್ಚಗಳ ಕುರಿತು ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಗಣ್ಯರಾದ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಸಂತೋಷ ಶೆಟ್ಟಿ, ಉದ್ಯಮಿ-ಚೇತನ್‌ ಶೆಟ್ಟಿ, ಸರ್ವತ್ತೋಮ ಕಡಂಬ, ವಾಸು ಶೆಟ್ಟಿ, ಹರಿಶ್ಚಂದ್ರ ಕುಲಾಲ್‌, ಚಂದ್ರಶೇಖರ ಹೆಗ್ಡೆ, ಕೆ ಶಾಂತರಾಮ್ ಹೆಗ್ಡೆ, ಮಹಾವೀರ ಕಡಂಬ ಹಾಗೂ ವಿವಿಧ ಸಂಘ ಸಂಸ್ಥೆಗಳ ಗಣ್ಯರು ಸಮಾಜದ ಇನ್ನೂ ಅನೇಕರು ಉಪಸ್ಥಿತರಿದ್ದು ಸಂಪೂರ್ಣ ಸಹಕಾರದ ಭರವಸೆ ನೀಡಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.