logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಮಲ್ಪೆಯ ದ್ವೀಪಗಳಲ್ಲಿ ಪ್ರವಾಸಿಗರ ಅನುಕೂಲಕ್ಕೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಟ್ರೆಂಡಿಂಗ್
share whatsappshare facebookshare telegram
19 Feb 2025
post image

ಉಡುಪಿ: ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಲ್ಪೆ-ಪಡುಕೆರೆಯ ದರಿಯಾ ಬಹದ್ದೂರ್ ಹಾಗೂ ಮಾಲ್ತಿದ್ವೀಪಗಳು ಪ್ರಾಕೃತಿಕವಾಗಿ ಇದ್ದು, ಇಲ್ಲಿನ ಪ್ರಾಕೃತಿಕ ಸೌಂದರ್ಯ ಸೊಬಗು ಪ್ರವಾಸಿಗರನ್ನು ಮನಸೂರೆಗೊಳಿಸುತ್ತವೆ. ಈ ತಾಣದಲ್ಲಿ ಪ್ರವಾಸಿಗರ ಚಟುವಟಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು. ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸಿಗರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಆಧುನಿಕತೆಯ ಸ್ವರೂಪದೊಂದಿಗೆ ಜನಾಕರ್ಷಣೀಯವಾಗಿ ಕೈಗೊಳ್ಳಬೇಕು. ಪ್ರವಾಸಿಗರಿಗೆ ವಾಹನಗಳ ಪಾಕಿಂಗ್ ವ್ಯವಸ್ಥೆ, ಆಸನದ ವ್ಯವಸ್ಥೆ ಸೇರಿದಂತೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ತ್ರಾಸಿ ಬೀಚ್‌ನ ನಿರ್ವಹಣೆ ಹಾಗೂ ಜಲ ಸಾಹಸ ಚಟುವಟಿಕೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಟೆಂಡರ್ ಕರೆಯಲಾಗಿದ್ದು, ಯಾವುದೇ ಅಭ್ಯರ್ಥಿಗಳು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವುದು ಕಂಡುಬAದಿದೆ. ಕೆಲವು ಗುತ್ತಿಗೆದಾರರು ಕಡಲ ತೀರ ಹಾಗೂ ನದಿಯಲ್ಲಿಯೂ ಜಲಸಾಹಸ ಚಟುವಟಿಕೆ ಕೈಗೊಳ್ಳಲು ಹಾಗೂ ಪಾರ್ಕಿಂಗ್ ವ್ಯವಸ್ಥೆ ಸ್ಥಳ ಬದಲಾವಣೆ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಲು ಕೋರಿರುತ್ತಾರೆ. ಇವುಗಳನ್ನು ಪರಿಶೀಲಿಸಿ, ಸೂಕ್ತ ವ್ಯವಸ್ಥೆ ಸೇರಿದಂತೆ ಜಲಸಾಹಸ ಚಟುವಟಿಕೆಗಳಲ್ಲಿ ಭಾಗವಹಿಸುವವರಿಗೆ ಮೂರನೇ ವ್ಯಕ್ತಿಗಳ ವಿಮಾ ಸೌಲಭ್ಯವನ್ನು ಕಲ್ಪಿಸಲು ಸಹ ಷರತ್ತು ವಿಧಿಸಬೇಕು. ತ್ರಾಸಿ ಬೀಚ್ ಪಕ್ಕದ ರಾಷ್ಟಿçÃಯ ಹೆದ್ದಾರಿ ೬೬ ನ ಬೀಚ್‌ನ ಉದ್ದಕ್ಕೂ ದಾರೀದೀಪ ಅಳವಡಿಸಬೇಕು ಎಂದರು.

ಮಲ್ಪೆ ಬೀಚ್ ಪ್ರದೇಶಗಳಲ್ಲಿ ವ್ಯಾಪಾರ ಮಾಡುವ ಅಂಗಡಿಗಳು, ಕಾರ್ಟೆಜ್ ಸೇರಿದಂತೆ ಮತ್ತಿತರ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನೀಡಲಾದ ಸ್ಥಳದ ಬಾಡಿಗೆ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸಿ.ಯು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.