



ಮಂಗಳೂರು:
ದ.ಕ. ಜಿಲ್ಲಾ ಬಿಜೆಪಿ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಉಚಿತ ಕೋವಿಡ್ ಲಸಿಕಾ ಶಿಬಿರ ಜರುಗಿತು.
ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಬಿರವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಉದ್ಘಾಟಿಸಿದರು.
100ಕ್ಕಿಂತಲೂ ಹೆಚ್ಚು ನಾಗರಿಕರು ರಕ್ತದಾನ ಮಾಡಿದರು. 450 ಕ್ಕಿಂತಲೂ ಮಿಕ್ಕಿ ಸಾರ್ವಜನಿಕರು ಉಚಿತ ಕೋವಿಡ್ ಲಸಿಕೆಯನ್ನು ಪಡೆದರು.
ಶಿಬಿರದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹನುಮಂತ್ ಕಾಮತ್, ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಹಿತೈಷಿಗಳು, ಗಣ್ಯರು ಪಾಲ್ಗೊಂಡರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.