



ಶಿವಮೊಗ್ಗ: ರಾಜ್ಯದ ನೂತನ ವಿಮಾನ ನಿಲ್ದಾಣ, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ ಕುವೆಂಪು ನೆಲಕ್ಕೆ ನಾನು ಗೌರವದಿಂದ ನಮಿಸುತ್ತೇನೆ ಎಂದು ಹೇಳಿದರು.
ನೂತನ ವಿಮಾನ ನಿಲ್ದಾಣದಿಂದ ಶಿವಮೊಗ್ಗ ಜಿಲ್ಲೆ ಎಲ್ಲ ರಂಗಗಳಲ್ಲಿ ಅಭಿವೃದ್ದಿ ಹೊಂದಲಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಅವರಿಗೆ ನನ್ನ ಹುಟ್ಟು ಹಬ್ಬದ ಶುಭಾಶಯಗಳು. ಇತ್ತೀಚೆಗೆ ವಿಧಾನಸಭೆಯಲ್ಲಿ ಯಡಿಯೂರಪ್ಪ ಭಾಷಣ ಮಾಡಿದ್ದರು. ಅದು ಎಲ್ಲರಿಗೂ ಸ್ಪೂರ್ತಿ ಎಂದು ಮೋದಿ ಅಭಿಪ್ರಾಯಪಟ್ಟರು
ಸಭೆಯಲ್ಲಿ ಭಾಗವಹಿಸಿರುವ ಎಲ್ಲರೂ ಫ್ಲ್ಯಾಶ್ ಲೈಟ್ ಆನ್ ಮಾಡುವ ಮೂಲಕ ಯಡಿಯೂರಪ್ಪ ಅವರಿಗೆ ಗೌರವ ಸಲ್ಲಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.