logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ದೇಶದ ಬುಡಕಟ್ಟು ಜನಾಂಗದ ಅಭ್ಯುದಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ನಿರಂತರ ಪ್ರಯತ್ನ : ಸಚಿವ ವಿ ಸುನಿಲ್ ಕುಮಾರ್

ಟ್ರೆಂಡಿಂಗ್
share whatsappshare facebookshare telegram
13 Jun 2022
post image

ಕಾರ್ಕಳ: ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀಯವರ ನೇತೃತ್ವದ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮವು ಕಾರ್ಕಳ ಬಿಜೆಪಿ ಎಸ್.ಟಿ.ಮೋರ್ಚಾ ವತಿಯಿಂದ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಭಾಗಿತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮುದ್ರಾಡಿ ಗ್ರಾಪಂ ವ್ಯಾಪ್ತಿಯ ಕಬ್ಬಿನಾಲೆ ಮೇಲ್ಮಠ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಘನ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸನ್ಮಾನ್ಯ ವಿ ಸುನಿಲ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಕಳೆದ 8 ವರ್ಷಗಳಿಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅತ್ಯುತ್ತಮ ಆಡಳಿತ ನೀಡಿದೆ. ಬುಡಕಟ್ಟು ಜನಾಂಗದ ಏಳಿಗೆಗಾಗಿ 3110 ವನ್ ಧನ್ ವಿಕಾಸ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ದೇಶದಾದ್ಯಂತ 384 ಏಕಲವ್ಯ ಮಾದರಿ ವಸತಿ ವಿದ್ಯಾಲಯ ಕಾರ್ಯಾಚರಿಸುತ್ತಿದೆ. ಸ್ವಾತಂತ್ರ್ಯ ಹೋರಾಟಗಾರ ಹಾಗೂ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನವೆಂಬರ್ 15 ಜನುಮ ದಿನವನ್ನು ಜನ್ ಜಾತೀಯ ಗೌರವ ದಿವಸ್ ಎಂದು ಘೋಷಿಸಲಾಗಿದೆ. ಬುಡಕಟ್ಟು ಜನರ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಸರ್ಕಾರ ಕಟಿಬದ್ಧವಾಗಿದೆ ಎಂದರು. ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆ, ಉಜಾಲ ಯೋಜನೆ, ಗಡಿಯಲ್ಲಿ ಬಲಿಷ್ಠ ಮೂಲ ಸೌಕರ್ಯಕ್ಕೆ ಉತ್ತೇಜನ, ವಿಶ್ವದ ಅತೀ ದೊಡ್ಡ ಮತ್ತು ಅತೀ ವೇಗದ ಲಸಿಕೀಕರಣ ಅಭಿಯಾನದಿಂದ ದೇಶದ 87% ಕ್ಕೂ ಅಧಿಕ ಜನಸಂಖ್ಯೆಗೆ ಸಂಪೂರ್ಣ ಲಸಿಕೆ ವಿತರಣೆ, ಉಚಿತ ಪಡಿತರ ವ್ಯವಸ್ಥೆ ಸೇರಿದಂತೆ ಹಲವಾರು ಜನಪರ, ಜನಸ್ನೇಹಿ ಆಡಳಿತ ನೀಡಿದೆ ಎಂದರು. ಬಿಜೆಪಿ ಕಾರ್ಕಳ ಕ್ಷೇತ್ರ ಎಸ್. ಟಿ ಮೋರ್ಚಾದ ಅಧ್ಯಕ್ಷರಾದ ಕೆ.ಪಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಎಸ್ ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ ಚೇರ್ಕಾಡಿ, ಎಸ್. ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ನಿತ್ಯಾನಂದ ನಾಯ್ಕ, ಕಾರ್ಕಳ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ಬಿಜೆಪಿ ಹೆಬ್ರಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ರಮೇಶ್ ಕುಮಾರ್, ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಜ್ಯೋತಿ ಹರೀಶ್, ಕಾರ್ಕಳ ಕ್ಷೇತ್ರ ಬಿಜೆಪಿ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ, ಬಿಜೆಪಿ ಮುದ್ರಾಡಿ ಶಕ್ತಿಕೇಂದ್ರ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ಮುದ್ರಾಡಿ ಗ್ರಾ.ಪಂ ಅಧ್ಯಕ್ಷರಾದ ವಸಂತಿ, ವೈದ್ಯಾಧಿಕಾರಿಗಳಾದ ಡಾ.ಸುಶಾನ್ ಶೆಟ್ಟಿ, ಡಾ.ಸಿದ್ಧಾರ್ಥ್ ಶೆಟ್ಟಿ ಉಪಸ್ಥಿತಿದ್ದರು. ಬಿಜೆಪಿ ಕಾರ್ಕಳ ಕ್ಷೇತ್ರ ಎಸ್. ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಸ್ವಾಗತಿಸಿ, ಸೀತಾರಾಮ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು, ಎಸ್. ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಧರ ಗೌಡ ವಂದಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.