logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಸಜಂಗದ್ದೆ ಶ್ರೀ ರಾಮ ಭಟ್ ಅವರಿಗೆ ಪ್ರೊ.ಎಂ.ರಾಮಚಂದ್ರ ಸಂಸ್ಮರಣಾ ಪ್ರಶಸ್ತಿ

ಟ್ರೆಂಡಿಂಗ್
share whatsappshare facebookshare telegram
7 Jul 2023
post image

ಕಾರ್ಕಳ ಸಾಹಿತ್ಯ ಸಂಘದ ಸಂಸ್ಥಾಪಕರಾದ 'ಪ್ರೊ. ಎಂ.ರಾಮಚಂದ್ರ ಸಂಸ್ಮರಣೆಯ ಸಾಹಿತ್ಯ ಪ್ರಶಸ್ತಿ'ಗೆ ಈ ಸಾಲಿನಲ್ಲಿ ಶ್ರೇಷ್ಠ ಸಾಹಿತ್ಯ ಪರಿಚಾರಕರು ಹಾಗು ಸಾಹಿತಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕಿನ ಪಡ್ರೆ ಗ್ರಾಮದ ಶ್ರೀ ರಾಮ್ ಭಟ್ ಸಜಂಗದ್ದೆಯವರನ್ನು ತಜ್ಞರ ಆಯ್ಕೆ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಪ್ರಸ್ತುತ ಬಾರಕೂರಿನಲ್ಲಿ ನೆಲೆಸಿರುವ ಶ್ರೀ ರಾಮ್ ಭಟ್ ಅವರು ಬಾರಕೂರಿನ ನ್ಯಾಷನಲ್ ಕಾಲೇಜಿನಲ್ಲಿ ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶಂಕರನಾರಾಯಣದ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಅತಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಎಳೆಯ ಮಕ್ಕಳಿಗೆ‌ ತಲುಪಿಸಬೇಕು ಎನ್ನುವ ಆಶಯದೊಂದಿಗೆ ಸಾಹಿತ್ಯ ಕಮ್ಮಟ ಹಾಗೂ ಕಾರ್ಯಾಗಾರಗಳನ್ನು ನಡೆಸಿದ್ದರು. ಸಾಹಿತ್ಯಿಕವಾಗಿ ವಿದ್ಯಾರ್ಥಿಗಳನ್ನು ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಲು ತಮ್ಮ ವೃತ್ತಿ ಜೀವನದಲ್ಲಿ ೧೯ ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಘಟಿಸಿದ ಹಿರಿಮೆ ಇವರದ್ದು. ಇವರಿಂದ ಪ್ರೇರಣೆ ಪಡೆದ ಅನೇಕ ಎಳೆಯ ಪ್ರತಿಭೆಗಳು ಇಂದು ಸಾಹಿತ್ಯ ಕ್ಷೇತ್ರದಲ್ಲಿ ಮಿಂಚುತ್ತಿದ್ದಾರೆ.

ಉತ್ತಮ ಲೇಖಕರಾಗಿರುವ ಇವರು 'Nayars of Kerala', 'ನಾಡಿಗೆ ನಮಸ್ಕಾರಕ್ಕೆ ನೂರು ನಮಸ್ಕಾರ', 'ಅಜಪುರದ ಅಗ್ರಗಣ್ಯರು', 'ಹಾಲು ಜೇನು', 'ಭಾರತದ ಆರ್ಥಿಕ ಚರಿತ್ರೆ', 'ಹೂಡಿಕೆ ನಿಮ್ಮಲ್ಲೇ ಮಾಡಿಕೊಳ್ಳಿ' ಮುಂತಾದ ಆರು ಕೃತಿಗಳನ್ನು ರಚಿಸಿದ್ದಾರೆ. ಉತ್ತಮ ಸಂಘಟಕರು, ಲೇಖಕರು, ಭಾಷಾಂತರಕಾರರಾದ ಇವರನ್ನು ಆಳ್ವಾಸ್ ನುಡಿಸಿರಿಯ ಅಂಗವಾಗಿ ನೆಡೆದ 'ವಿದ್ಯಾರ್ಥಿ ಸಿರಿ' ಸಮ್ಮೇಳನದಲ್ಲಿ ಮತ್ತು ಮಕ್ಕಳ ಸಾಹಿತ್ಯ ಸಂಗಮದಿಂದ ಕಟೀಲಿನಲ್ಲಿ ನಡೆದ 'ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಲಾಗಿತ್ತು.

ಶ್ರೀಮತಿ ಶಾರದಾ ರಾಮಚಂದ್ರ ಮತ್ತು ಮಕ್ಕಳ ಪ್ರಾಯೋಜಕತ್ವದಲ್ಲಿ‌ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ ೨೦-೦೭-೨೩ರಂದು ಕಾರ್ಕಳದ ಪ್ರಕಾಶ್ ಹೋಟೆಲ್ ನ ಸಂಭ್ರಮ ಸಭಾಂಗಣದಲ್ಲಿ ನಡೆಯಲಿದೆ.ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಾವೇರಿಯ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಕೆ.ಚಿನ್ನಪ್ಪ ಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.