logo
WhatsApp Image 2026-04-02 at 14.46.04.jpeg
hindalco everlast.jpeg

ನಿಷೇಧಿತ ಪ್ಲಾಸ್ಟಿಕ್ ವಶ: ದಂಡ ವಸೂಲಿ

ಟ್ರೆಂಡಿಂಗ್
share whatsappshare facebookshare telegram
10 Nov 2023
post image

ಉಡುಪಿ, : ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿ ಸಂತೆ ಮಾರುಕಟ್ಟೆಯಲ್ಲಿ ಬುಧವಾರ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ 81 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು 12,400 ರೂ. ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು. ಧಿತ ಪ್ಲಾಸ್ಟಿಕ್ ವಸ್ತುಗಳ ಬದಲಿಗೆ ಮರುಬಳಕೆಯ ವಸ್ತುಗಳನ್ನು ಬಳಸುವಂತೆ ಸೂಚಿಸಲಾಯಿತು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್, ರೀಯೂಸ್, ರಿಸೈಕಲ್ ಮಾದರಿಯಲ್ಲಿ ತ್ಯಾಜ್ಯ ವಸ್ತುಗಳನ್ನು ಕಡಿಮೆ ಮಾಡುವ ಹಿತ ದೃಷ್ಟಿಯಿಂದ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಬೇಕು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿ ಮಾಡುವುದು, ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಪರಿಸರ ಸಂರಕ್ಷಣೆ ಮಾಡಲು ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು. ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್‌ವೈಸರ್‌ನವರು ಹಾಗೂ ಪೌರಕಾರ್ಮಿಕರು ಅನಿರೀಕ್ಷಿತ ದಾಳಿ ನಡೆಸುತ್ತಿದ್ದು, ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸುವುದು ಕಂಡುಬAದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸುವುದರೊಂದಿಗೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.