


ನಂದಿನಿಯ ಬಹುನಿರೀಕ್ಷಿತ ದೋಸೆ ಹಿಟ್ಟು, ಇಡ್ಲಿ ಹಿಟ್ಟು ಕೊನೆಗೂ ಮಾರುಕಟ್ಟೆಗೆ ಎಂಟ್ರಿಯಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ರೆಡಿ ಟು ಕುಕ್ ನಂದಿನಿ ವೇ ಪ್ರೋಟೀನ್ ಆಧಾರಿಕ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದಾರೆ.
ಕೆಎಂಎಫ್ ಬಿಡುಗಡೆ ಮಾಡಿರುವ ಈ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ 5ರಷ್ಟು ಪ್ರೋಟೀನ್ ಅಂಶವನ್ನು ಸೇರಿಸಲಾಗಿದೆ. ಸದ್ಯ ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಲಾಗಿದೆ.
ದೋಸೆ ಹಾಗೂ ಇಡ್ಲಿ ಹಿಟ್ಟಿನ 450 ಗ್ರಾಂ ತೂಕದ ಪೊಟ್ಟಣಕ್ಕೆ 40 ರೂಪಾಯಿ ಮತ್ತು 900 ಗ್ರಾಂ ತೂಕದ ಪೊಟ್ಟಣಕ್ಕೆ 80 ರೂಪಾಯಿಯನ್ನು ಮಾರಾಟ ದರವನ್ನು ನಿಗದಿ ಮಾಡಲಾಗಿದೆ.
ನಾಗರಿಕರ ಬಹುದಿನಗಳ ಅಪೇಕ್ಷೆಯಂತೆ ಇದೀಗ ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆಯಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ. ವೇ ಪ್ರೋಟೀನ್ ಆಧಾರಿತ ಉತ್ಕೃಷ್ಟ ಗುಣಮಟ್ಟದ ಹಿಟ್ಟು ಕೈಗೆಟುಕುವ ದರದಲ್ಲಿ ಗ್ರಾಹಕರಿಗೆ ಲಭ್ಯವಿದ್ದು, ಬೆಳಗ್ಗಿನ ಉಪಾಹಾರವು ಗರಿಗರಿ ದೋಸೆ, ಸವಿಸವಿ ಇಡ್ಲಿಯೊಂದಿಗೆ ರುಚಿ ಮತ್ತು ಆರೋಗ್ಯವನ್ನು ವೃದ್ಧಿಗೊಳಿಸಲಿದೆ ಎಂದಿದ್ದಾರೆ.
ಹಾಲಿನ ಉತ್ಪನ್ನಗಳಿಂದ ಇದೀಗ ತಿನಿಸಿನ ಪ್ರಪಂಚಕ್ಕೂ ನಂದಿನಿ ಎಂಟ್ರಿಯಾಗಿರುವುದು ನಂದಿ ಪ್ರಿಯರಲ್ಲಿ ಖುಷಿ ಮೂಡಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.