


ಹೆಬ್ರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಬ್ರಿ ತಾಲೂಕ್ ಕಛೇರಿ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಕೈಗೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿ ಹೆಬ್ರಿ ಮಹಾ ಶಕ್ತಿ ಕೇಂದ್ರದ ಪದಾಧಿಕಾರಿಗಳು ಭೇಟಿ ನೀಡಿ ಪ್ರತಿಭಟನಾ ನಿರತರ ಮನವಿ ಸ್ವೀಕರಿಸಿದರು.ಈ ಬಗ್ಗೆ ಶಾಸಕರ ಜೊತೆ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಹೆಬ್ರಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ಲಕ್ಮಿನಾರಾಯಣ ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ತಾರಾನಾಥ್ ಬಂಗೇರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.