logo
WhatsApp Image 2026-04-02 at 14.46.04.jpeg
hindalco everlast.jpeg

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮುಂಜಾಗ್ರತೆ ವಹಿಸಿ..!

ಟ್ರೆಂಡಿಂಗ್
share whatsappshare facebookshare telegram
12 Mar 2024
post image

ಉಡುಪಿ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಗಿನಂತೆ ಸಲಹೆಗಳನ್ನು ನೀಡಿದೆ. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಹತ್ತಿ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಸೇವಿಸಬೇಕು.

ಬೆಳಗ್ಗೆ 11 ರಿಂದ ಸಂಜೆ 4 ರ ವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಆದಷ್ಟು ಕಡಿಮೆ ಮಾಡಬೇಕು. ಸಾಕಷ್ಟು ನೀರಿನೊಂದಿಗೆ ಮಜ್ಜಿಗೆ ಮತ್ತು ಗ್ಲೂಕೋಸ್ / (ಓ.ಆರ್.ಎಸ್) ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಜೊತೆಗೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಬೇಕು. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವ೦ತೆ ನೋಡಿಕೊಳ್ಳಬೇಕು. ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್‌ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್‌ಗಳ ಮಧ್ಯ ಇಡಬಹುದು. ಹೀಟ್ ವೇವ್ ಸ್ಟೋಕ್ ಗೆ ಒಳಗಾದ ವ್ಯಕ್ತಿಯಲ್ಲಿ ಯಾವುದೇ ಸುಧಾರಣೆ ಕಂಡುಬರದಿದ್ದಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ತುರ್ತು ಸೇವೆಗಾಗಿ ಶುಲ್ಕ ರಹಿತ:1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದ ಆಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.