logo
WhatsApp Image 2026-04-02 at 14.46.04.jpeg
hindalco everlast.jpeg

ಪುರಿ ಜಗನ್ನಾಥ ರಥಯಾತ್ರೆ ವೇಳೆ ಜನದಟ್ಟಣೆ: 9 ಮಂದಿ ಸ್ಥಿತಿ ಗಂಭೀರ ಪುರಿ

ಟ್ರೆಂಡಿಂಗ್
share whatsappshare facebookshare telegram
28 Jun 2025
post image

ಪುರಿ: ಐತಿಹಾಸಿಕ ಪುರಿ ಜಗನ್ನಾಥ ದೇಗುಲದ ರಥಯಾತ್ರೆ ವೇಳೆ ಶುಕ್ರವಾರ ಅತಿಯಾದ ಸೆಕೆ ಮತ್ತು ಕಿಕ್ಕಿರಿದ ಜನದಟ್ಟಣೆಯಿಂದಾಗಿ ಸುಮಾರು 625 ಮಂದಿ ಕುಸಿದು ಬಿದ್ದಿದ್ದು, ಅಸ್ವಸ್ಥಗೊಂಡರು ಎಂದು ಅಧಿಕಾರಿಗಳು ತಿಳಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಸುಮಾರು 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ ಒಂಬತ್ತು ಮಂದಿಯ ಸ್ಥಿತಿ ಗಂಭೀರವಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಜನದಟ್ಟಣೆಯಿಂದಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಲವರಿಗೆ ವಾಂತಿಯಾದರೆ ಮತ್ತೆ ಕೆಲವರು ನಿಶ್ಯಕ್ತಿಯಿಂದ ಬಳಲಿದ್ದರು. ಹಲವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ’ ಎಂದು ಪುರಿ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಡಾ.ಕಿಶೋರ್‌ ಸತ್ಪತಿ ತಿಳಿಸಿದರು.

‘ಲಕ್ಷಾಂತರ ಜನರು ಗಂಟೆಗಟ್ಟಲೆ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿದ್ದರು. ದಟ್ಟಣೆಯಿಂದ ಹೊರಬರಲು ಕೆಲವರು ಯತ್ನಿಸಿದ್ದರಿಂದ ಅಹಿತಕರ ಪರಿಸ್ಥಿತಿಗೆ ಕಾರಣವಾಯಿತು’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದರು.

ದಟ್ಟಣೆಯ ಪರಿಣಾಮ ಬಾಲಭದ್ರ ಸ್ವಾಮಿಯ ರಥ ಮತ್ತು ತಳಧ್ವಜ ಗಂಟೆಗಳ ಕಾಲ ಒಂದೇ ಸ್ಥಳದಲ್ಲಿ ಸಿಲುಕಿಕೊಂಡಿತ್ತು. ಈ ಪ್ರದೇಶದಲ್ಲಿಯೇ ಹಲವರು ಗಾಯಗೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯ ಆಡಳಿತದ ಸಿಬ್ಬಂದಿ ಮತ್ತು ಖಾಸಗಿ ಸಂಘ ಸಂಸ್ಥೆಗಳ ಸ್ವಯಂಸೇವಕರು ಇದಕ್ಕೆ ನೆರವಾದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.