



ಪುತ್ತೂರು : ಬಡಗನ್ನೂರು ಗ್ರಾ.ಪಂ.ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.6ರಂದು ರಾತ್ರಿ ಕುದ್ಕಾಡಿಯ ಮನೆಯಲ್ಲಿ ಗುರುಪ್ರಸಾದ್ ರೈ ಹಾಗೂ ತಾಯಿ ಕಸ್ತೂರಿ ಅವರನ್ನು ಕಟ್ಟಿ ಹಾಕಿ ಚಿನ್ನಾಭರಣ-ನಗದು ಹಣ ದರೋಡೆ ನಡೆಸಲಾಗಿತ್ತು.
ಆರೋಪಿಗಳು ಮಾರಕಾಯುಧಗಳನ್ನು ಹಿಡಿದು ಬೆದರಿಸಿ ಇಬ್ಬರನ್ನೂ ಸೋಫಾದಲ್ಲಿ ಕುಳ್ಳಿರಿಸಿ, ಚಿನ್ನದ ಸರ, 4 ಚಿನ್ನದ ಬಳೆಗಳ ಸಹಿತ ಒಟ್ಟು ರೂ.2.40 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ರೂ.30ಸಾವಿರ ನಗದುಹಣ ದರೋಡೆ ಮಾಡಿ ,ಬೆದರಿಕೆ ಹಾಕಿದ್ದರು.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ವಿಟ್ಲ ಪೆರುವಾಯಿಯ ಸುಧೀರ್ ಮಣಿಯಾಣಿ,ಕೇರಳದ ಇಚ್ಲಂಗೋಡು ಗ್ರಾಮದ ಪಚ್ಚಂಗಳದ ರವಿ, ಪೈವಳಿಕೆ ಸಮೀಪದ ಅಟ್ಟಿಗೋಳಿಯ ಕಿರಣ್, ಸೀತಾಂಗೊಳ್ಳಿ ಸಮೀಪದ ಬಾಡೂರಿನ ವಸಂತ್, ಕೇರಳದ ಫೈಝಲ್ ಮತ್ತು ಕಾಸರಗೋಡಿನ ಎಡನಾಡ್ ಗ್ರಾಮದ ರಾಜೀವ ಗಾಂಧಿ ನಗರದ ಅಬ್ದುಲ್ ಸಿಸಾರ್ ಎಂದು ತಿಳಿದು ಬಂದಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.