



ಪುತ್ತೂರು : ಅವಿಭಕ್ತ ಹವ್ಯಕ ಕುಟುಂಬದ ಕೆ.ರಾಮ ಭಟ್ಟರವರು ತನ್ನ ಪ್ರೌಢಶಿಕ್ಷಣದ ವೇಳೆಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಸ್ವಯಂಸೇವಕರಾಗಿದ್ದವರು. ಆರ್.ಎಸ್.ಎಸ್. ಮೂಲಕ ಪುತ್ತೂರನ್ನು ಹಿಂದುತ್ವದ ಭದ್ರಕೋಟೆ ಮಾಡಲು ಅಡಿಪಾಯ ಹಾಕಿದ್ದವರು. ಜನಸಂಘ, ಬಿಜೆಪಿ ಮೂಲಕ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯಂತಹ ರಾಷ್ಟ್ರ ಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದವರು. ವಕೀಲರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಪುರಸಭೆಯ ಅಧ್ಯಕ್ಷರಾಗಿ, ಕ್ಯಾಂಪ್ಕೋದ ಅಧ್ಯಕ್ಷರಾಗಿದ್ದರು. 92 ವರ್ಷ ಹಿರಿಯ ರಾಜಕಾರಣಿ ರಾಮ್ ಭಟ್ ಹಿರಿಯ ಜನಸಂಘದ ಧುರೀಣರೂ ಆಗಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.