



ಕಾರ್ಕಳ: ಕರ್ನಾಟಕ ಸರರ್ಕಾರದ ಐಟಿ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿ.ಸಿ.ಎಸ್ ಹಾಗೂ ಬಾಲಕಿಯರ ಸರಕಾರಿ ಪ.ಪೂ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಐಟಿ ರಸಪ್ರಶ್ನೆಯು ಅ.9ರಂದು ರಂದು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ೧೦ನೇ ತರಗತಿಯ ಶೋಧನ್ ಹೆಗ್ಡೆ, ೯ನೇ ತರಗತಿಯ ಸ್ವಸ್ತಿ ವಿ ಶೆಟ್ಟಿ ಮತ್ತು ಸ್ಕಂದ ಪೆರ್ವಾಜೆ ಪ್ರಾದೇಶಿಕ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಜೇತರಿಗೆ ಅಜೆಕಾರು ಪದ್ಮಗೋಪಾಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿ, ಶುಭ ಹಾರೈಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.