logo
WhatsApp Image 2026-04-02 at 14.46.04.jpeg
hindalco everlast.jpeg

ನಗರದಲ್ಲಿ ರಾಘವೇಂದ್ರ ಸ್ವಾಮಿ ಮಠದ ರಜತ ಮಹೋತ್ಸಮ: ಪುತ್ತಿಗೆ ಶ್ರೀಗಳಿಗೆ ತುಲಾಭಾರ ಸೇವೆ

ಟ್ರೆಂಡಿಂಗ್
share whatsappshare facebookshare telegram
24 Jul 2022
post image

ಉಡುಪಿ‌: ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ಕಾರ್ಯಕ್ರಮ ಹಾಗೂ ರಜತ ಮಹೋತ್ಸಮ ನಡೆಯಿತು. ಸಮಾರಂಭವನ್ನು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಶರವು ಮಹಾಗಣಪತಿ ದೇವಸ್ಥಾನದ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿ, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ವರುಣ್ ಚೌಟ , ಮಠದ ರಾಘವೇಂದ್ರ ಎಚ್ ವಿ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಜತಮಹೋತ್ಸವ ಸಮಿತಿಯ ವತಿಯಿಂದ ಶ್ರೀಪಾದರ ಷಷ್ಟ್ಯಬ್ದ ಪ್ರಯುಕ್ತ ಶ್ರೀಗಳಿಗೆ ಗಣ್ಯರ ಸಮ್ಮುಖದಲ್ಲಿ ಬೆಳ್ಳಿಯ ಕಿರೀಟ ತೊಡಿಸಿ ತುಲಾಭಾರ ನೆರವೇರಿಸಲಾಯಿತು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.