



ನವದೆಹಲಿ: ಇಂಡಿಯಾದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಟಿ೨೦ ವಿಶ್ವಕಪ್ ಬೆನ್ನಲ್ಲೇ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲೀಗ ರಾಹುಲ್ ಅವರನ್ನು ಎರಡು ವರ್ಷಗಳ ಅವಧಿಗೆ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಆದೇಶ ನೀಡಿದೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಅವರು ಭಾರತ ತಂಡ ಮುಖ್ಯ ಕೋಚ್ ಆಗಿ ನೇಮಕಗೊಳ್ಳುವ ಮುನ್ನ ಎನ್‌ಸಿಎ ಮುಖ್ಯಸ್ಥರ ಹುದ್ದೆಯನ್ನು ತ್ಯಜಿಸಲಿದ್ದಾರೆ. ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಟೀಂ ಇಂಡಿಯಾ ಕೋಚ್ ಆಗಲು ರಾಹುಲ್ ದ್ರಾವಿಡ್‌ಗೆ ಬಿಗ್ ಆಫ್ ನೀಡಿದೆ. ರಾಹುಲ್ ಪ್ರತೀ ವರ್ಷ ಸುಮಾರು 10 ಕೋಟಿ ರೂಪಾಯಿ ವೇತನವನ್ನು ಪಡೆಯಲಿದ್ದಾರೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.