



ರಾಜ್ಯದಲ್ಲಿ ಇತ್ತೀಚಿನ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ, ಉರಿ ಬಿಸಿಲಿನ ನಡುವೆ ವರುಣ ದರ್ಶನ ನೀಡಿದ್ದು, ರಾಜ್ಯದ ಕೆಲವೆಡೆ ಮಳೆಯ ಅಬ್ಬರಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ನಗರದಲ್ಲಿಂದು ಬೆಳಗ್ಗಿನಿಂದ ಮೋಡ ಕವಿದ ವಾತಾವರಣವಿರಲಿದ್ದು, ಲಘು ಮಳೆಯಾಗುವ ಸಂಭವವಿರುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ನಡುವೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಹಾಸನ, ಕೊಡಗು, ರಾಮನಗರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಹವಾಮಾನ ವರದಿಯ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಕುರಿತು ಮಾಹಿತಿ ನೀಡಿ ಎಚ್ಚರಿಕೆ ನೀಡಿದೆ.ಈ ನಡುವೆ ಕೆಲ ಪ್ರದೇಶಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಹೆಚ್ಚು ಕಂಡುಬರುವ ಸಾಧ್ಯತೆಗಳಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಮಲೆನಾಡು,ಕೊಡಗು ಮತ್ತು ಕರಾವಳಿ ಭಾಗದಲ್ಲಿ ತುಂತುರು ಮಳೆಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.