logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
19 Apr 2023
post image

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಏ.19ರಿಂದ ಏ.22ರವರೆಗೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ಚಿತ್ರದುರ್ಗ, ಮೈಸೂರು ಮತ್ತು ತುಮಕೂರಿನಲ್ಲಿ ಏ.21ರಿಂದ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಉಷ್ಣಾಂಶ ಏರಿಳಿತವಾಗುತ್ತಿದೆ.

ಸೋಮವಾರ ಕಲಬುರಗಿ 40.7, ರಾಯಚೂರು 40, ಗದಗ 38.7, ವಿಜಯಪುರ 38, ಚಿತ್ರದುರ್ಗ ಮತ್ತು ಧಾರವಾಡದಲ್ಲಿ ತಲಾ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.