



ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಆಗಸ್ಟ್ 16ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಕೋಟ, ಶಿರಾಲಿ, ಕ್ಯಾಸಲ್ ರಾಕ್, ಪಣಂಬೂರು, ಗೇರುಸೊಪ್ಪ, ಹೊನ್ನಾವರ, ಪೊನ್ನಂಪೇಟೆ, ವಿರಾಜಪೇಟೆ, ಚಿಕ್ಕಬಳ್ಳಾಪುರ, ಉಪ್ಪಿನಂಗಡಿ, ಸುಳ್ಯ, ಮಂಕಿ, ಗೋಕರ್ಣ, ಕುಮಟಾ, ಕದ್ರಾ, ಉಡುಪಿ, ಇಳಕಲ್, ಬಾಗಲಕೋಟೆ, ಮಸ್ಕಿ, ಮುದಗಲ್, ನಾಪೋಕ್ಲು, ಲಿಂಗನಮಕ್ಕಿ, ಚಿಕ್ಕನಹಳ್ಳಿ, ಕೊನೇಹಳ್ಳಿಯಲ್ಲಿ ಮಳೆಯಾಗಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಒಂದೆಡೆ ಮೋಡಕವಿದ ವಾತಾವರಣವಿದೆ, ಆದರೂ ಬಿಸಿಲು ಆಗಾಗ ಕಾಣಿಸಿಕೊಳ್ಳುತ್ತಿದೆ, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.