logo
WhatsApp Image 2026-04-02 at 14.46.04.jpeg
hindalco everlast.jpeg

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಟ್ರೆಂಡಿಂಗ್
share whatsappshare facebookshare telegram
23 Dec 2021
post image

ಬೆಂಗಳೂರು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ. ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಮತ್ತು ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೇಟ್ಟಿಲೇರಿದ್ದರು. ಇದೀಗ ರಾಜೇಶ್ವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

2016ರ ಜುಲೈ 28ರಂದು ಉದ್ಯಮಿ ಭಾಸ್ಕರ್​ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ಹೋಮದ ಕುಂಡದಲ್ಲಿ ಹಾಕಿ ಸುಟ್ಟಿದ್ದರು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.