logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ರಕ್ಷಾಬಂಧನ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
28 Aug 2026
post image

ಕಾರ್ಕಳ: ನಗರದ ಆರಾಮ್ ಇಂಡಸ್ಟ್ರೀಸ್ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೇವಾಕೇಂದ್ರದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಾಸರಗೋಡು ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬಿ.ಕೆ. ವಿಜಯಾಜಿ ಅವರು ರಕ್ಷಾಬಂಧನ ಹಬ್ಬದ ಆಧ್ಯಾತ್ಮಿಕ ಮಹತ್ವವನ್ನು ವಿವರಿಸಿದರು.

ಪ್ರಪಂಚದ ಎಲ್ಲ ಮಾನವ ಆತ್ಮರೂ ಒಬ್ಬ ಪರಮಾತ್ಮನ ಸಂತಾನರು. ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿದ್ದು, ನೈತಿಕ ಹಾಗೂ ಆಧ್ಯಾತ್ಮಿಕ ಶಕ್ತಿಯ ಕೊರತೆ ಕಂಡುಬರುತ್ತಿದೆ. ಇಂತಹ ಸಂದರ್ಭದಲ್ಲಿ ಪರಮಾತ್ಮನ ಅವತರಣೆಯಾಗಿದೆ ಎಂದು ಅವರು ಹೇಳಿದರು.

ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಉಚಿತವಾಗಿ ನೀಡಲಾಗುತ್ತಿರುವ ರಾಜಯೋಗ ಶಿಕ್ಷಣದ ಮೂಲಕ ವಿಶ್ವ ನವ ನಿರ್ಮಾಣದ ಕಾರ್ಯ ನಡೆಯುತ್ತಿದೆ. ಇದರ ಪ್ರಯೋಜನ ಪಡೆದುಕೊಳ್ಳುವವರು ತಮ್ಮ ಜೀವನವನ್ನು ಶ್ರೇಷ್ಠ ಹಾಗೂ ಮೌಲ್ಯಯುತವಾಗಿ ರೂಪಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಸೇವಾಕೇಂದ್ರದ ಸಂಚಾಲಕಿ ಬಿ.ಕೆ. ವಿಜಯಲಕ್ಷ್ಮಿ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಿ.ಕೆ. ಗಾಯತ್ರಿ, ಬಿ.ಕೆ. ಪ್ರಪುಲ್ಲ ಹಾಗೂ ಬಿ.ಕೆ. ಶಾಂತ ಅವರು ಈಶ್ವರೀಯ ಕಾಣಿಕೆ ನೀಡಿದರು. ಬಿ.ಕೆ. ವರದರಾಯ ಅವರು ವಂದಿಸಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.