logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
18 Sept 2021
post image

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಶಿಫಾರಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಮೇಶ್ ಕಾಂಚನ್ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಆದೇಶದ ಪ್ರತಿಯನ್ನು ಶನಿವಾರ ರಮೇಶ್ ಕಾಂಚನ್ ಅವರಿಗೆ ಹಸ್ತಾಂತರಿಸಿದರು. ಉಡುಪಿ ತಾ.ಪಂ. ಸದಸ್ಯರಾಗಿ, ಎರಡು ಅವಧಿಗೆ ಉಡುಪಿ ನಗರಸಭಾ ಸದಸ್ಯರಾಗಿ, ಪ್ರಸಕ್ತ ನಗರಸಭೆಯ ವಿರೋಧ ಪಕ್ಷದ ನಾಯಕರಾಗಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಉತ್ತಮ ಸಂಘಟಕರಾಗಿ ಹೆಸರು ಮಾಡಿರುವ ಕಾಂಚನ್ ಅವರು ಮೊಗವೀರ ಸಂಘಟನೆಯ ಜಿಲ್ಲಾ ಘಟಕದ ಸ್ಥಾಪಕ ಉಪಾಧ್ಯಕ್ಷರಾಗಿ, ಮಣಿಪಾಲ ರಿಕ್ಷಾ ಚಾಲಕ-ಮಾಲಕರ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಶೀರೂರು ಮಠ ಹಾಗೂ ಪುತ್ತಿಗೆ ಮಠಗಳ ಪರ್ಯಾಯದಲ್ಲಿ ಹಿರಿಯಡ್ಕ ವಿಭಾಗದ ಹೊರೆ ಕಾಣಿಕೆ ಸಮಿತಿಯ ಅಧ್ಯಕ್ಷರಾಗಿ, ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟದ ಆರ್ಥಿಕ ಸಮಿತಿಯ ಅಧ್ಯಕ್ಷರಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿಯ ಮಾದಕ ವ್ಯಸನ ವಿಮೋಚನಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ತಮ್ಮನ್ನು ಸಾಮಾಜಿಕವಾಗಿ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.