



ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ.
ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.