ಉತ್ತರ ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ 17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ.
ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಸ್ಟೇಷನ್ ಹೌಸ್ ಆಫೀಸರ್ ಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರವೆಸಗುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಆರೋಪಿಗಳು ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಯುವತಿ ಹೇಗೋ ತನ್ನ ಮನೆಗೆ ಬಂದು ಘಟನೆಯ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆಯಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪಾಠಕ್ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.