



ಉಳ್ಳಾಲ: ಅಪ್ರಾಪ್ತೆಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.
ಘಟನೆ ವಿವರ: ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತೆ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀರ್ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂದರ್ಭ ಅಪ್ರಾಪ್ತೆ ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು ಇಟ್ಟು ಬಾಯಿ ಮುಚ್ಚಿಸಿದ್ದ ಎಂದು ಆರೋಪಿಸಲಾಗಿದೆ. ಈ ಘಟನೆ ಬಳಿಕ ಸಂತ್ರಸ್ತೆಯು ಅಜ್ಜಿ ಮನೆಯಲ್ಲಿ ವಾಸವಾಗಿ ಅಲ್ಲಿಂದಲೇ ಶಾಲೆಗೆ ಹೋಗುತ್ತಿದ್ದಳು. ಕೆಲ ಸಮಯದ ಬಳಿಕ ಮಲತಂದೆ ಇರುವಾಗಲೇ ತಾಯಿಯನ್ನು ನೋಡಲು ಬರುತ್ತಿದ್ದ ಆಕೆ, ಈ ವಿಚಾರವನ್ನು ತನ್ನ ತಾಯಿಗೆ ತಿಳಿಸಿದ್ದಾಳೆ. ಈ ವಿಚಾರ ಅಜ್ಜಿ ಮನೆಯವರಿಗೂ ಗೊತ್ತಾಗಿದ್ದು, ಬಳಿಕ ಸಂತ್ರಸ್ತೆ ಯುವತಿಯು ಉಳ್ಳಾಲ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಪ್ರಾಪ್ತೆ ಯುವತಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂದಿದೆ.
ಆರೋಪಿ ಅಮೀರ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಿಸಿದ ಪೊಲೀಸರು ರವಿವಾರ ಆತನನ್ನು ಬಂಧಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.