



ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿ -ದೇವಸ ರವೀಂದ್ರ ಶೆಟ್ಟಿ ಆಗ್ರಹ ಕೋಟ:ರೈತರು ಬೆಳೆದ ಬೆಳೆಗಳಿಗೆ ಸರಕಾರ ನಿರ್ದಿಷ್ಟ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ದೇವಸ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲದ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ,ಗೀತಾನಂದ ಫೌಂಡೇಶನ್ ಮಣೂರು,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್, ಮಹಿಳಾ ಬಳಗ ಹಂದಟ್ಟು,ರೈತಧ್ವನಿ ಸಂಘ ಕೋಟ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ೧೦ನೇ ತಿಂಗಳ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ರೈತನೇ ದೇಶದ ಆಸ್ತಿಯಾಗಿದ್ದಾನೆ ಅಂತಹ ರೈತನಿಗೆ ಸರಕಾರದ ವಿವಿಧ ರೀತಿಯ ಸೌಲಭ್ಯಗಳು ವಂಚಿತಗೊಳ್ಳುತ್ತಿದೆ.ಸರಕಾರ ರೈತರ ಅಭಿವೃದ್ಧಿಗೆ ಪ್ರೇರಕವಾಗುವ ಕಾರ್ಯಕ್ರಮಗಳನ್ನು ಘೋಷಿಸಬೇಕು ಆಗಮಾತ್ರ ಕೃಷಿ ಉಳಿಯಲು ಸಾಧ್ಯ ಯುವ ಸಮುದಾಯ ಕೃಷಿಗೆ ಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿ ತಜ್ಞ ಮಣೂರು ಭಾಸ್ಕರ್ ಶೆಟ್ಟಿ ರವೀಂದ್ರ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಿದರು. ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ಮಹೇಶ್ ಶೆಟ್ಟಿ ,ಕೋಟ ಪಂಚಾಯತ್ ಸದಸ್ಯ ಪ್ರಶಾಂತ್ ಹೆಗ್ಡೆ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಅಧ್ಯಕ್ಷೆ ಜ್ಞಾಹ್ನವಿ ಹೇರ್ಳೆ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಶ್ರೀಕಾಂತ್ ಶೆಣೈ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಪುಷ್ಭಾ ಕೆ ಹಂದಟ್ಟು, ಪಂಚವರ್ಣ ಯುವಕ ಮಂಡಲದ ಗೌರವ ಸಲಹೆಗಾರ ಉಮೇಶ್ ಪ್ರಭು,ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣ ಯುವಕ ಮಂಡಲದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಾಲಿಗ್ರಾಮ ಸುಜಾತ ಬಾಯಿರಿ ನಿರೂಪಿಸಿದರು.ಪಂಚವರ್ಣದ ಸಂಚಾಲಕ ಅಜಿತ್ ಆಚಾರ್ಯ ವಂದಿಸಿದರು.
ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.